Admin Dec 4, 2017

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬೇರೆ ಯಾರೂ ಚುನಾವಣೆಗೆ ನಾಮಪತ್ರ ಸಲ್ಲಿಸದ ಕಾರಣ ಸಂಜೆಯ ಹೊತ್ತಿಗೆ ಅವರು ಅಧಿಕೃತವಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೊರಹೊಮ್ಮುವುದು ಬಹುತೇಕ ಖಚಿತವಾಗಿದೆ.

ಕಳೆದ 5 ವರ್ಷಗಳಿಂದ ಕಾಂಗ್ರೆಸ್ ಉಪಾಧ್ಯಕ್ಷರಾಗಿರುವ  ರಾಹುಲ್, ಅಧ್ಯಕ್ಷರಾಗುವ ನಿರೀಕ್ಷೆ ಎಲ್ಲರಲ್ಲೂ ಇತ್ತು. ಅದರಂತೆ ಅವರು ಅಧ್ಯಕ್ಷ ಹುದ್ದೆಗೆ ದೆಹಲಿಯ ’24 ಅಕ್ಬರ್ ರೋಡ್’ನಲ್ಲಿನ ಪಕ್ಷದ ಕೇಂದ್ರ ಕಛೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ಅದಕ್ಕೂ ಮೊದಲು ಪ್ರಣವ್ ಮುಖರ್ಜಿ, ಮನಮೋಹನ್ ಸಿಂಗ್ ಅವರಿಂದ ಆಶೀರ್ವಾದ ಪಡೆದುಕೊಂಡರು.

ತಾಯಿ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಅವರ ಹೆಸರನ್ನು ನಾಮಪತ್ರ ಸಲ್ಲಿಕೆ ವೇಳೆ ಪ್ರಸ್ತಾಪಿಸಿದರು.

Leave a comment.

Your email address will not be published. Required fields are marked*