Admin Dec 5, 2017

ನವದೆಹಲಿ: ಒಂದೇ ಸಮನೆ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ದರದಲ್ಲಿ ಇದೀಗ ಕೊಂಚ ಇಳಿಕೆ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬೆಲೆಯ ಏರಿಳಿತ ಆಧರಿಸಿ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ.

ದೆಹಲಿಯಲ್ಲಿ ಚಿನ್ನದ ಬೆಲೆ 300 ರೂ. ಕಡಿಮೆಯಾಗಿದ್ದು, ಪ್ರತಿ 10 ಗ್ರಾಂ ಚಿನ್ನದ ದರ 29,700 ರೂ.ಗೆ ಇಳಿದಿದೆ. ಬೆಳ್ಳಿ ಬೆಲೆಯಲ್ಲಿಯೂ ಕೊಂಚ ಕಡಿಮೆಯಾಗಿದ್ದು, ಪ್ರತಿ ಕೆ.ಜಿ.ಗೆ 150 ರೂ. ಇಳಿಕೆಯಾಗಿ 37,900 ರೂ. ತಲುಪಿದೆ.

ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿಗೆ ಬೇಡಿಕೆ ಕಡಿಮೆಯಾದ ಕಾರಣ ಬೆಲೆಯಲ್ಲಿ ಇಳಿಕೆಯಾಗಿದೆ.

Leave a comment.

Your email address will not be published. Required fields are marked*