Admin Dec 7, 2017

ಮಂಗಳೂರು: ಖಾಸಗಿ ಬಸ್ ಮತ್ತು ಕಂಟೈನರ್ ಮುಖಾಮುಖಿ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟ ಘಟನೆ ಮಂಗಳೂರಿನ ನಂತೂರು ಸಮೀಪದಲ್ಲಿ ಇಂದು ಬೆಳಗ್ಗೆ ನಡೆದಿದೆ.


ಮೃತ ಮಹಿಳೆಯನ್ನು ಕವಿತಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 21 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a comment.

Your email address will not be published. Required fields are marked*