Admin Dec 7, 2017

ಬೆಂಗಳೂರು: ಚುನಾವಣಾ ಪ್ರಚಾರದ ದೃಷ್ಟಿಯಿಂದ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊಟ್ಟ ಮೊದಲು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ಸುದ್ದಿ ಮೂಲಗಳು ವರದಿ ಮಾಡಿದೆ. ಹೀಗಾಗಿ ರಾಹುಲ್ ಗಾಂಧಿ ಪ್ರವಾಸಕ್ಕೆ ಸೂಕ್ತ ಸಿದ್ಧತೆ ನಡೆಸುವಂತೆ ರಾಜ್ಯ ಕಾಂಗ್ರೆಸ್​ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್​ ನಾಯಕರೊಂದಿಗೆ ಗುಪ್ತ ಸಭೆ ನಡೆಸಿದ ಕೆ.ಸಿ.ವೇಣುಗೋಪಾಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಹುಲ್​ ಡಿ.19ರ ನಂತರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಆ ನಂತರ ದೇಶಾದ್ಯಂತ ಪರ್ಯಟನೆ ನಡೆಸಲಿರುವ ರಾಹುಲ್​ ಮೊದಲಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ವೇಣುಗೋಪಾಲ್​ ತಿಳಿಸಿದ್ದಾರೆ.

Leave a comment.

Your email address will not be published. Required fields are marked*