Admin Dec 7, 2017

ಅಧಿಕಾರಿಗಳ ವಿರುದ್ಧ ದೂರು ನೀಡಿ ವಿಚಾರಣೆಗೆ ಹಾಜರಾಗದೆ ಲೋಕಾಯುಕ್ತರಿಂದ ಛೀಮಾರಿ ಹಾಕಿಸಿಕೊಂಡ ಪುತ್ತೂರು ನಗರಸಭೆಯ ಅಧ್ಯಕ್ಷರು ಕೂಡಲೇ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ.

ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಗರಸಭೆಯ ಬಿಜೆಪಿ ಸದಸ್ಯ ರಾಜೇಶ್ ಬನ್ನೂರು ತನ್ನ ಲಾಭಕ್ಕಾಗಿ ನಗರಸಭೆಯ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಹಾಗೂ ತಾವು ಹೇಳದಂತೆ ಕೇಳದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡುತ್ತಿರುವ ಅಧ್ಯಕ್ಷರು ಹಾಗೂ ಅವರ ಹಿಂಬಾಲಕರಿಗೆ ರಾಜ್ಯ ಲೋಕಾಯುಕ್ತರು ಸೂಕ್ತ ಉತ್ತರವನ್ನು ನೀಡಿದ್ದಾರೆ.

ಅಲ್ಲದೇ ಸ್ವತ: ಲೋಕಾಯುಕ್ತರೇ ಹೇಳಿದಂತೆ ನಗರಸಭೆಯ ಅಧ್ಯಕ್ಷತೆ ವಹಿಸಲು ಅಸಾಧ್ಯವಾದರೆ ರಾಜೀನಾಮೆ ಕೊಟ್ಟು ಆಡಳಿತ ಮಂಡಳಿಯನ್ನು ವಿಸರ್ಜಿಸಿ ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು. ಅಧಿಕಾರಿಗಳ ವಿರುದ್ಧ ಸುಳ್ಳು ದೂರುಗಳನ್ನು ದಾಖಲಿಸಿ ಬಳಿಕ ವಿಚಾರಣೆಯನ್ನು ತಪ್ಪಿಸಿಕೊಳ್ಳುತ್ತಿರುವ ಅಧ್ಯಕ್ಷರು ಹಾಗೂ ಅವರ ಹಿಂಬಾಲಕರು ಪುತ್ತೂರು ನಗರದ ಅಭಿವೃದ್ಧಿಗೆ ಮಾರಕವಾಗಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು.

 

 

Leave a comment.

Your email address will not be published. Required fields are marked*