Admin Dec 7, 2017

ಮಂಗಳೂರು: ಮಂಗಳೂರಿನಲ್ಲಿ ಕಳ್ಳರು ಮತ್ತೆ ತಮ್ಮ ಕೈಚಳಕ ತೋರಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲದ ಉಕ್ಕುಡದಲ್ಲಿ ಮನೆಗೆ ನುಗ್ಗಿದ ಖದೀಮರು 44 ಪವನ್ ತೂಕದ ಸುಮಾರು 10.5ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದಾರೆ.
ಉಕ್ಕುಡದ ಅಬ್ಬಾಸ್ ಹಾಜಿ ಎಂಬುವವರ ಮನೆಯಲ್ಲಿ ಕಳ್ಳರು ಈ ಕೃತ್ಯ ಎಸಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ 10.5ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ ಎಂದು ತಿಳಿದುಬಂದಿದೆ.

Leave a comment.

Your email address will not be published. Required fields are marked*