Admin Dec 7, 2017

ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಚಾರದ ಅಬ್ಬರವೂ ಬಿರುಸಿನಿಂದ ಸಾಗಿದೆ. ವಿಪಕ್ಷಗಳ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಎಲ್ಲಾ ಪಕ್ಷಗಳು ಮಾಡುತ್ತಿದ್ದು, ಒಂದು ಪಕ್ಷದ ಮೇಲೆ ಮತ್ತೊಂದು ಪಕ್ಷ ಸವಾರಿ ಮಾಡುತ್ತಿದೆ.
ಕಾಂಗ್ರೆಸ್​ ಪಕ್ಷವನ್ನು ತರಾಟೆಗೆ ತೆಗೆದುಕೊಂಡು ಮಾತಾನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ಹತ್ತಿರ ಬಂರುತ್ತಿದ್ದಂತೆ ಎಲ್ಲಾ ಅಭಿವೃದ್ದಿ ಕಾರ್ಯಕ್ರಮಗಳನ್ನು ಬಿರುಸಿನಿಂದ ಶುರು ಮಾಡುತ್ತಿದ್ದಾರೆ. ಬಡ ಜನರ ತೆರಿಗೆ ಹಣದಲ್ಲಿ ಚುನಾವಣೆಗೆ ಪ್ರಚಾರ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಅಲ್ಲದೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭಿವೃದ್ದಿ ಹೆಸರಿನಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳಿಗಾಗಿ 1 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಟೀಕಿಸಿದರು. ಸಿಎಂ ಸಿದ್ದರಾಮಯ್ಯ ಅವರು ಭಟ್ಕಳಕ್ಕೆ ಏಕಾಏಕಿ ಭೇಟಿ ನೀಡಿ 1500 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. ಇದು ಚುನಾವಣ ದೃಷ್ಠಿಯಿಂದ ಜನರನ್ನು ಸೆಳೆಯಲು ಮಾಡುತ್ತಿರುವ ತಂತ್ರಗಾರಿಕೆ ಅಲ್ಲದೆ ಮತ್ತೇನು? ಅಂತ ವ್ಯಂಗ್ಯವಾಡಿದ್ದಾರೆ.

Leave a comment.

Your email address will not be published. Required fields are marked*