Admin Jan 3, 2018

ಮಂಗಳೂರು : ಕಾಟಿಪಳ್ಳದಲ್ಲಿ ಹತ್ಯೆಗೀಡಾದ ದೀಪಕ್ ರಾವ್ ಅವರ ಕುಟುಂಬಕ್ಕೆ 25 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಬೇಕೆಂದು ಬಿಜೆಪಿ ಮುಖಂಡ, ಶಾಸಕ ಸಿ.ಟಿ.ರವಿ ಸರಕಾರವನ್ನು ಒತ್ತಾಯಿಸಿದ್ದಾರೆ.

ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿದ ಸಿ.ಟಿ.ರವಿ ದೀಪಕ್ ರಾವ್ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮಾಧ್ಯಮದೊಂದಿಗೆ ಮಾತನಾಡಿದ ಸಿ.ಟಿ. ರವಿ. ತರಬೇತಿ ಪಡೆದ ದುಷ್ಕರ್ಮಿಗಳಿಂದ ಹಿಂದುಗಳ ಕೊಲೆಯಾಗುತ್ತಿದೆ. ಓಟ್ ಬ್ಯಾಂಕ್ ರಾಜಕಾರಣವೇ ಇಂತಹ ಕೊಲೆಗಳಿಗೆ ಕಾರಣ ಎಂದು ಕಿಡಿಕಾರಿದರು. ದನಕಳ್ಳ ಕಬೀರ್ ಪೊಲೀಸರ ಗುಂಡಿಗೆ ಬಲಿಯಾದಾಗ ಆತನ ಮನೆಗೆ ತೆರಳಿ ಪರಿಹಾರ ನೀಡಿದ ಕಾಂಗ್ರೆಸ್ ಹಿಂದುಗಳ ಕೊಲೆಯ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಅವರು ಹೇಳಿದರು.

Leave a comment.

Your email address will not be published. Required fields are marked*