Admin Jan 3, 2018

ಮಂಗಳೂರು : ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಪೊಲೀಸ್ ಉನ್ನತಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಅಹಿತಕರ ಘಟನೆಗಳು ನಡೆಯುವುದನ್ನು ತಪ್ಪಿಸುವುದಕ್ಕಾಗಿ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಗುರುವಾರ ರಾತ್ರಿ ಹತ್ತು ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗುರುವಾರ ಬೆಳಿಗ್ಗೆ 9.30ಕ್ಕೆ ನಗರದ ಎಜೆ ಆಸ್ಪತ್ರೆಯಿಂದ ಶವಯಾತ್ರೆ ಹೊರಡಲಿದೆ ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಬೇಕೆಂದು ಹಿಂದು ಸಂಘಟನೆಗಳು ವಾಟ್ಸಾಫ್ ಸಂದೇಶಗಳನ್ನು ರವಾನಿಸುತ್ತಿದ್ದು. ನಿಷೇಧಾಜ್ಞೆಯ ಪ್ರಯುಕ್ತ ಶವಯಾತ್ರೆಗೆ ಅವಕಾಶ ನೀಡಲಾಗುತ್ತದೆಯೇ ಎಂಬ ಕುತೂಹಲವಿದೆ.
ಗುರುವಾರ ಸುರತ್ಕಲ್ ಮತ್ತು ಕಾಟಿಪಳ್ಳ ಬಂದ್‌ಗೆ ವಿಶ್ವಹಿಂದು ಪರಿಷತ್ ಹಾಗೂ ಹಿಂದೂ ಜಾಗರಣಾ ವೇದಿಕೆ ಕರೆ ನೀಡಿದೆ ಎಂದು ಸಾಮಾಜಿಕ ತಾಣಗಳಲ್ಲಿ ಸಂದೇಶ ರವಾನೆಯಾಗುತ್ತಿದೆ.

Leave a comment.

Your email address will not be published. Required fields are marked*