Admin Jan 12, 2018

ಮಂಗಳೂರು: ಚುನಾವಣಾ ಪ್ರಚಾರಕ್ಕಾಗಿ ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಅವರನ್ನು ಬಹಿಷ್ಕರಿಸಬೇಕೆಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಹೇಳಿದ್ದಾರೆ.
ಅಮಿತ್​ ಶಾ ಅವರಿಂದ ರಾಜ್ಯದ ಸುವ್ಯವಸ್ಥೆ ಹಾಳು ಮಾಡುವ ಕೆಲಸ ನಡೆಯುತ್ತಿದೆ. ಅವರ ಭೇಟಿಯನ್ನು ನಾವೂ ಖಂಡಿಸುತ್ತೇವೆ. ರಾಜ್ಯ ಸರ್ಕಾರ ಹಿಂದೂ ವಿರೋಧಿ ಎಂದು ಪದೇ ಪದೇ ಹೇಳುವ ಮೂಲಕ ರಾಜ್ಯದ ಜನತೆಯ ಮನಸಲ್ಲಿ ನಮ್ಮ ಪಕ್ಷದ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುವಂತೆ ಮಾಡಿ ಅಮಿತ್ ಶಾ ರಾಜಕೀಯ ಲಾಭಕ್ಕೆ ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮಹದಾಯಿ ವಿವಾದ ಬಿಜೆಪಿಯವರಿಗೆ ನುಂಗಲಾರದೆ ತುತ್ತಾಗಿ ಪರಿಣಮಿಸಿದೆ. ರಾಜ್ಯದ ಜನತೆ ಬಿಜೆಪಿ ಸರ್ಕಾರದ ಮೇಲೆ ಸಂಪೂರ್ಣವಾಗಿ ವಿಶ್ವಾಸವನ್ನು ಕಳೆದುಕೊಂಡಿದೆ ಎಂದು ಮಂಗಳೂರಿನಲ್ಲಿ ಐವನ್ ಡಿಸೋಜಾ ಹೇಳಿದ್ದಾರೆ.

Leave a comment.

Your email address will not be published. Required fields are marked*