Admin Jan 12, 2018

ತುಮಕೂರು: ರಾಜ್ಯದ ಮುಖ್ಯಮಂತ್ರಿಗಳು ಮಾತೆತ್ತಿದ್ರೆ ಸಾಕು ನನ್ನ ಹೆಸರಲ್ಲಿ ರಾಮ ಇದ್ದಾನೆ, ರಾಮ ಇದ್ದಾನೆ ಎಂದು ಜಪ ಮಾಡುತ್ತಿದ್ದಾರೆ. ಅವರ ಹೆಸರಲ್ಲಿ ರಾಮನ ಬದಲಾಗಿ ರಾವಣ ಇರಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ಶಿರಾದಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಬಿಎಸ್​ವೈ ಅವರು ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಇಂತಹ ಬಿಜೆಪಿ ಪಕ್ಷವನ್ನು ಉಗ್ರಗಾಮಿ ಎಂದಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಮಾತು ಶೋಭೆ ತರುವುದಿಲ್ಲ ಎಂದು ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಯಡಿಯೂರಪ್ಪ ಅವರು ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬರುಲಿದ್ದು, ಕಾಂಗ್ರೆಸ್ ಸರಕಾರದ ಕೈಗೊಂಬೆಯಂತೆ ವರ್ತಿಸುವ ಪೊಲೀಸ್ ಅಧಿಕಾರಿಗಳ ಪರಿಸ್ಥಿತಿ ಸರಿ ಇರುವುದಿಲ್ಲ ಎಂಬ ಎಚ್ಚರಿಕೆಯನ್ನು ರವಾನಿಸಿದ್ದಾರೆ.

Leave a comment.

Your email address will not be published. Required fields are marked*